ಕೇಂದ್ರ ಸರಕಾರದ ನೋಟು ನಿಷೇಧ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

Update: 2023-01-02 05:53 GMT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ 2016 ರ ನೋಟು ನಿಷೇಧವನ್ನು ಸುಪ್ರೀಂ ಕೋರ್ಟ್ ಇಂದು ಬೆಂಬಲಿಸಿದೆ ಹಾಗೂ  ಕೇಂದ್ರ ಸರಕಾರವು ಅದನ್ನು ನಿಷೇಧಿಸಿದೆ ಎಂಬ ಕಾರಣಕ್ಕೆ ನಿರ್ಧಾರವನ್ನು ತಪ್ಪೆಂದು ಹೇಳಲು  ಸಾಧ್ಯವಿಲ್ಲ ಎಂದು ಹೇಳಿದೆ.

ಆರ್‌ಬಿಐನ ಕೇಂದ್ರೀಯ ಮಂಡಳಿಯೊಂದಿಗೆ ಸಮಾಲೋಚಿಸಿದ ನಂತರ ಕೇಂದ್ರವು ಕ್ರಮ ತೆಗೆದುಕೊಳ್ಳಬೇಕಾಗಿದೆ ಹಾಗೂ  ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ನ್ಯಾಯಾಧೀಶರು ಹೇಳಿದರು.

1,000  ಹಾಗೂ  500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ನಿಷೇಧಿಸುವ ಕೇಂದ್ರದ ನವೆಂಬರ್ 2016 ರ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ 58 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದು ಸರಕಾರದ ಪರಿಗಣಿತ ನಿರ್ಧಾರವಲ್ಲ ಹಾಗೂ  ನ್ಯಾಯಾಲಯವು ಅದನ್ನು ತಳ್ಳಿ ಹಾಕಬೇಕು ಎಂದು ವಾದಿಸಲಾಗಿತ್ತು.

Similar News