ಸಿದ್ಧೇಶ್ವರ ಸ್ವಾಮೀಜಿ ನಿಧನ: ಕಂಬನಿ ಮಿಡಿದ ಗಣ್ಯರು ಏನೆಂದರು?

Update: 2023-01-03 07:07 GMT

ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ (82) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸ ಸಭೆ  ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ‌


“ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ.”

-ನರೇಂದ್ರ ಮೋದಿ, ಪ್ರಧಾನ ಮಂತ್ರಿ

----------------------------------------

''ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಯವರು ಲಿಂಗೈಕ್ಯರಾದ ಸುದ್ದಿಯು ಅತ್ಯಂತ ದುಃಖದಾಯಕವಾಗಿದೆ. ಜನರ ಆಸ್ತಿಕ ಭಾವನೆಗಳು ಮೌಢ್ಯಗಳತ್ತ ಜಾರದಂತೆ ಆಧ್ಯಾತ್ಮಿಕ ಅಂತಃಶಕ್ತಿ ತುಂಬಿ, ಸನ್ಮಾರ್ಗ ತೋರುತ್ತಾ, ಸಾಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಸದಾ ಲೋಕದ ಹಿತ ಬಯಸುತ್ತಿದ್ದ ಶ್ರೀಗಳನ್ನ ಕಳೆದುಕೊಂಡ ನಾಡು ಬಡವಾಗಿದೆ''

ಮಲ್ಲಿಕಾರ್ಜುನ ಖರ್ಗೆ- ಎಐಸಿಸಿ ಅಧ್ಯಕ್ಷರು. 

------------------------------------------

 “ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು”

-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

-------------------------------------------------

“ದೇಶ ಕಂಡ ಶ್ರೇಷ್ಠ ಸಂತರು,ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿರವರು ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟುಮಾಡಿದೆ. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ,ಅವರ ಭಕ್ತ ಸಮೂಹಕ್ಕೆ ಈ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ”

- ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ

--------------------------------------------

“ಜ್ಞಾನಯೋಗಾಶ್ರಮದ ಪೀಠಾಧೀಶರಾದ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ. ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಲಾಗದ ನಷ್ಟ”

-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

-------------------------------------------------

“ಸಿದ್ಧೇಶ್ವರ ಸ್ವಾಮೀಜಿಗಳು ಯಾವ ಲೌಕಿಕ ವಿಶೇಷಣಗಳಿಗೂ ನಿಲುಕುವಂಥವರಲ್ಲ. ಅವರನ್ನು ಜನತೆ ನಡೆದಾಡುವ ದೇವರು ಎಂದು ಪ್ರೀತ್ಯಾದರಗಳಿಂದ ಗೌರವಿಸುತ್ತಿದ್ದರು. ನಿಜವಾದ ಅರ್ಥದಲ್ಲಿ ಅವರೊಬ್ಬ ಅವಧೂತರು. ಪುರಾಣಕಾಲದ ಋಷಿ ಸದೃಶ ವ್ಯಕ್ತಿತ್ವ ಹೊಂದಿದ್ದವರು.”

-ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

--------------------------------------------------

''ವಿಜಯಪುರದ ಜ್ಞಾನ ಯೋಗಾಶ್ರಮದ ಸಂತ, ಧೀಮಂತ ಪರಮಾರ್ಥ ಜ್ಞಾನದ ಜ್ಞಾನ ಯೋಗಿ, ಸಂಸ್ಕೃತ ವಾಂಜ್ಮಯದ ಪ್ರಭುದ್ಧ,‌ ವೇದೋಪನಿಷತ್ತುಗಳ ಭಂಡಾರ, ನಡೆದಾಡುವ ದೇವರೆಂದೇ ಮನೆ ಮಾತಾಗಿದ್ದ,‌ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾದ ಸುದ್ದಿ ತೀವ್ರ ದುಃಖ ತಂದಿದೆ. ಅವರ ಭಕ್ತವೃಂದದ ಹೃದಯದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವುದೇ ನಾವು ಅವರಿಗೆ ಸಲ್ಲಿಸಬಹುದಾದ ಅತ್ಯುನ್ನತ ಗೌರವವಾಗಿದೆ''. 

ಪ್ರಹ್ಲಾದ್ ಜೋಶಿ - ಕೇಂದ್ರ ಸಚಿವ 

-----------------------------------------------------

'ಖ್ಯಾತ ಪ್ರವಚನಕಾರರು ಹಾಗೂ ಜ್ಞಾನಕೋಶವೆಂದೇ ಪ್ರಸಿದ್ಧರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ಕೇಳಿ ಅತೀವ ನೋವುಂಟಾಯಿತು. ಅವರ ಸಾವು ತುಂಬಲಾಗದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಅವರ ಅಪಾರ ಭಕ್ತರಿಗೆ ನನ್ನ ಸಂತಾಪಗಳು.'

ಡಿ.ಕೆ ಶಿವಕುಮಾರ್  - ಕೆಪಿಸಿಸಿ ಅಧ್ಯಕ್ಷರು

--------------------------------------------------------

ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಗಲಿಕೆಯ ಸುದ್ದಿ ತಿಳಿದು ಮನಸ್ಸಿಗೆ ಅಪಾರ ದುಃಖವಾಯಿತು. ಆಧ್ಯಾತ್ಮದ ಬಗ್ಗೆ ಆಳವಾದ ಅಧ್ಯಯನ ನಡೆಸಿದ ನಡೆದಾಡುವ ಜ್ಞಾನಕೋಶ, ಮಧುರ ಸ್ವಭಾವದವರಾದ ಶ್ರೀಗಳ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸುವೆ. ಹಿತೈಷಿಗಳು, ಭಕ್ತಗಣಕ್ಕೆ ನೋವನ್ನು ಭರಿಸುವ ಶಕ್ತಿ ದೊರಕಲಿ.

- ಡಾ. ಅಶ್ವತ್ಥನಾರಾಯಣ ಸಿ.ಎನ್- ಉನ್ನತ ಶಿಕ್ಷಣ ಸಚಿವರು. 

Similar News