ಉಡುಪಿ: ಜಿಲ್ಲಾ ಮಟ್ಟದ ಸಮಿತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ

Update: 2023-01-04 13:59 GMT

ಉಡುಪಿ: ಸಮಾಜಕಲ್ಯಾಣ ಇಲಾಖೆಯ ವತಿಯಿಂದ ಅನುಸೂಚಿತ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ನೋಂದಾಯಿಸಲಾದ ಪ್ರಕರಣಗಳ ವಿಚಾರಣೆ, ದೌರ್ಜನ್ಯ ಪ್ರಕರಣಗಳಲ್ಲಿ ನೀಡಬೇಕಾದ/ ನೀಡಲಾದ ಪರಿಹಾರ, ಸಂತ್ರಸ್ತರ ಪುನರ್‌ವಸತಿ ಹಾಗೂ ಇತ್ಯಾದಿಗಳ ಬಗ್ಗೆ ಕ್ರಮ ವಹಿಸಲು ಜಿಲ್ಲಾ ಮಟ್ಟದ ಜಾಗೃತ ಸಮಿತಿಗೆ ಪರಿಶಿಷ್ಟ ಜಾತಿ ಮತ್ತು ಪ. ಪಂಗಡಕ್ಕೆ ಸೇರಿದ ಅರ್ಹರನ್ನು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಕ್ಕೆ ಸೇರಿರದ ಎನ್‌ಜಿಓನಿಂದ 3 ಜನರನ್ನು 3 ವರ್ಷಗಳ ಅವಧಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಬೇಕಾಗಿದೆ.

ಆದ್ದರಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪ. ಪಂಗಡಕ್ಕೆ ಸೇರಿರದ ಎನ್‌ಜಿಓ ಹಾಗೂ ಸರ್ಕಾರಿ ನೌಕರರೇತರ ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದ ವ್ಯಕ್ತಿಗಳು ಸಮಿತಿ ಸಭೆಯ ಸದಸ್ಯರಾಗಲು, ತಮ್ಮ ಸ್ವವಿವರವುಳ್ಳ ಅರ್ಜಿಯನ್ನು ಜಾತಿ ಪ್ರಮಾಣ ಪತ್ರ, ಪ.ಜಾತಿ/ಪ. ಪಂಗಡದ ಶ್ರೇಯೋಭಿವೃದ್ಧಿಗೆ ಸೇವೆ ಸಲ್ಲಿಸಿದ್ದಲ್ಲಿ ಅಂತಹ ವಿವರಗಳನ್ನೊಳಗೊಂಡ ದಾಖಲೆಗಳನ್ನು ಜನವರಿ 20ರೊಳಗೆ ಉಪ ನಿರ್ದೇಶಕರು, ಸಮಾಜಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸಬಹುದು ಎಂದು ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News