ಐದು ದಿನಗಳಲ್ಲಿ ದಿಲ್ಲಿಯಲ್ಲಿ ಎರಡನೇ ಬಾರಿ ಭೂಕಂಪನ ಅನುಭವ

Update: 2023-01-05 15:56 GMT

ಹೊಸದಿಲ್ಲಿ: ಅಫ್ಘಾನಿಸ್ತಾನದ ಫೈಝಾಬಾದ್‌ನಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ ಬಳಿಕ ಒಂದು ವಾರದಲ್ಲಿ ಎರಡನೇ ಬಾರಿಗೆ ದಿಲ್ಲಿ ಮತ್ತು ಅದರ ನೆರೆಯ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.

ಭೂಕಂಪನವು ಭೂಮಿಯ ಮೇಲ್ಮೈಯಿಂದ 200 ಕಿಮೀ ಆಳದಲ್ಲಿದ್ದು, ರಾತ್ರಿ 8 ಗಂಟೆ ಸುಮಾರಿಗೆ ಕಂಪನದ ಅನುಭವವಾಗಿದೆ. ಯಾವುದೇ ಗಾಯ ಅಥವಾ ಹಾನಿಯ ವರದಿಯಾಗಿಲ್ಲ.

ಇದಕ್ಕೂ ಮೊದಲು, ರವಿವಾರ ಮುಂಜಾನೆ ದಿಲ್ಲಿ-ಎನ್‌ಸಿಆರ್‌ನಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. NCS ದೇಶದಲ್ಲಿ ಭೂಕಂಪದ ಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡಲು ಭಾರತ ಸರ್ಕಾರದ ನೋಡಲ್ ಏಜೆನ್ಸಿಯಾಗಿದೆ.

Similar News