ಪರ್ಯಾಯ ಸಾಹಿತ್ಯ ಸಮ್ಮೇಳನದಲ್ಲಿ ಚರ್ಚೆಯಾಗುವ ಅಂಶಗಳನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ: ಸಿಎಂ ಬೊಮ್ಮಾಯಿ

Update: 2023-01-06 10:32 GMT

ಹಾವೇರಿ, ಜನವರಿ 06: ''ಪರ್ಯಾಯ ಸಾಹಿತ್ಯ ಸಮ್ಮೇಳನ ಪ್ರತಿ ಸಾಹಿತ್ಯ ಸಮ್ಮೇಳನವಾದಾಗಲೂ ಇರುತ್ತದೆ. ಅದನ್ನು ನಾವು ಕ್ರೀಡಾಮನೋಭಾವದಿಂದ ತೆಗೆದುಕೊಂಡು, ಅಲ್ಲಿ ಚರ್ಚೆಯಾಗುವ ವಿಷಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು 86 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ  ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.  

ನನ್ನ ತವರು ಜಿಲ್ಲೆಯಲ್ಲಿ ಸಮ್ಮೇಳನ  ನಡೆಯುತ್ತಿರುವುದು ಬಹಳ ಸಂತೋಷ ತಂದಿದೆ. ಹಾವೇರಿ ಜ್ಞಾನದ ನಾಡು, ಸಾಹಿತ್ಯದ ಬೀಡು. ಇಂಥ ನಾಡಿನಲ್ಲಿ ಸಾಹಿತ್ಯ ಸಮ್ಮೇಳನ ಮಾಡುವ ಮೂಲಕ ಕನ್ನಡ , ಕನ್ನಡ ಅಸ್ಮಿತೆಯನ್ನು ಎತ್ತಿಹಿಡಿದಂತಾಗುತ್ತದೆ.  ಪ್ರಚಲಿತ ವಿಷಯಗಳ ಬಗ್ಗೆ ಚರ್ಚೆ  ಮಾಡುವುದು, ಪರಿಹಾರ ನೀಡುವುದು, ಭವಿಷ್ಯದಲ್ಲಿ ಕನ್ನಡ ಹಾಗೂ ಕನ್ನಡ ಸಾಹಿತ್ಯ ಯಾವ ಮಟ್ಟಕ್ಕೆ ಹೋಗಬೇಕು ಎನ್ನುವ ಉತ್ಕೃಷ್ಟ ಸಾಹಿತ್ಯ ರಚನೆಗೆ ಮುನ್ನಡಿಯಾಗಲಿದೆ ಎಂದರು. 

ಕಾದು ನೋಡಿ: ಸರ್ಕಾರ ಈಗಾಗಲೇ ಗಡಿನಾಡು ಕನ್ನಡಿಗರ ಅಭಿವೃದ್ಧಿಗೆ ಪ್ಯಾಕೇಜ್ ಘೋಷಣೆ ಮಾಡಿದೆ. ಚರ್ಚೆಗಳ ಆಧಾರದ ಮೇಲೆ ಸಮಾರೋಪ ಸಮಾರಂಭದಲ್ಲಿ ತೀರ್ಮಾನಿಸಿ ಭರವಸೆ ನೀಡಲಾಗುವುದು ಎಂದರು. 

Similar News