2023ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ

Update: 2023-01-09 12:51 GMT

ಕೋಲಾರ: 2023ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೋಲಾರ ನಗರದ ಮಿನಿ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿದ್ದ ಕೋಲಾರ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. "ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ, ಹೈಕಮಾಂಡ್ ಒಪ್ಪಿಗೆ ಮೇಲೆ ನನ್ನ ನಿರ್ಧಾರ ಅವಲಂಬಿಸಿದೆ ಎಂದರು.

Similar News