ಉಡುಪಿ: ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ
Update: 2023-01-10 13:33 GMT
ಉಡುಪಿ: ಡಿ.ದೇವರಾಜಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಹಾಗೂ ಗಂಗಾಕಲ್ಯಾಣ ನೀರಾವರಿ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3 ಬಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 17 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂಖ್ಯೆ: 080-22374832, 8050770004, 8050770006, 7090400100 ಅಥವಾ 0820-2574882 ಅನ್ನು ಸಂಪರ್ಕಿಸಬಹುದು ಎಂದು ನಿಗಮದಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.