ಹೊಲಿಗೆ ಯಂತ್ರ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಗಳೂರು, ಜ.10: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2022-2023ನೇ ಸಾಲಿನ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಅರ್ಹ ಮಹಿಳೆಯರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೊಲಿಗೆ ಯಂತ್ರದ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಒಂದು ಕುಟುಂಬದಲ್ಲಿ ಓರ್ವ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿದ್ದು, ಅರ್ಜಿದಾರರು ವಯಸ್ಸು 18 ರಿಂದ 55 ವರ್ಷಗಳ ಮಿತಿ ಹೊಂದಿರಬೇಕು.
ಆಸಕ್ತರು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಸೇವಾ ಕೇಂದ್ರಗಳಲ್ಲಿ ಜ.17ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://dbcdc.karnataka.gov.in ಅಥವಾ ದೂ.ಸಂ. 080-23156006ಗೆ ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.