ಉಡುಪಿ: ಜ.12ಕ್ಕೆ ಯುವ ಸಪ್ತಾಹ ಉದ್ಘಾಟನೆ

Update: 2023-01-11 14:20 GMT

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾಲೇಜು ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ಸ್ಪಂದನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯುವ ಸಪ್ತಾಹದ ಉದ್ಘಾಟನೆ ನಾಳೆ ಜ.12ರ ಬೆಳಗ್ಗೆ 9:30ಕ್ಕೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. 

Similar News