ಮೆಟ್ರೊ ಪಿಲ್ಲರ್ ದುರಂತ: ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್

Update: 2023-01-13 13:21 GMT

ಬೆಂಗಳೂರು, ಜ.13: ನಾಗವಾರ ಪ್ರದೇಶದಲ್ಲಿ ಇತ್ತೀಚೆಗೆ ನಿರ್ಮಾಣ ಹಂತದಲ್ಲಿದ್ದ ಮೆಟ್ರೊ ಪಿಲ್ಲರ್ ಕುಸಿದು ತಾಯಿ, ಮಗು ಸಾವಿಗೀಡಾದ ಪ್ರಕರಣ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರದ ಕುರಿತು ಪ್ರಮುಖ ದಿನ ಪತ್ರಿಕೆಗಳ ವರದಿಯನ್ನು ಪರಿಗಣಿಸಿ ಹೈಕೋರ್ಟ್ (High Court of Karnataka) ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದೆ. 

ಶುಕ್ರವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ನ್ಯಾಯಪೀಠ, ಪ್ರಮುಖ ದಿನ ಪತ್ರಿಕೆಗಳ ವರದಿಯನ್ನು ಉಲ್ಲೇಖಿಸಿದರು. ಅಲ್ಲದೇ, ಬೆಂಗಳೂರಿನಲ್ಲಿ ಜ.10 ಮತ್ತು 12ರಂದು ಪ್ರತ್ಯೇಕವಾಗಿ ನಡೆದಿರುವ ಪ್ರಕರಣಗಳು ಸಂಜ್ಞೇಯ(ಕಾಗ್ನಿಜೆನ್ಸ್) ಪರಿಗಣಿಸುವಂತೆ ಮಾಡಿದೆ. ಈ ನಿಟ್ಟಿನಲ್ಲಿ ರಿಜಿಸ್ಟಾçರ್ ಜನರಲ್ ಅವರಿಗೆ ಕೇಸ್ ದಾಖಲಿಸಲು ಆದೇಶಿಸಲಾಗಿದೆ ಎಂದು ಪೀಠವು ಹೇಳಿತು.

ಮಹಿಳೆ ಮತ್ತು ಆಕೆಯ ಮಗು ಸಾವನ್ನಪ್ಪಿರುವ ವಿಚಾರದಲ್ಲಿ ಹಾಗೂ ಗುತ್ತಿಗೆ ನೀಡುವ ವಿಚಾರಕ್ಕೆ ಸಂಬAಧಿಸಿದAತೆ ಕೈಗೊಂಡಿರುವ ಸುರಕ್ಷತಾ ಕ್ರಮಗಳು ಮತ್ತು ಟೆಂಡರ್ ದಾಖಲೆಗಳು ಸುರಕ್ಷತಾ ಕ್ರಮಗಳನ್ನು ನಿರ್ದಿಷ್ಟಪಡಿಸಿವೆಯೇ ಎಂಬ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ನ್ಯಾಯಾಲಯವು ಉತ್ತರಗಳನ್ನು ಕೇಳಿದೆ.

ಮೆಟ್ರೊ ಪಿಲ್ಲರ್ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಸಂಬಂಧಿತ ಇಲಾಖೆಗಳು, ಬಿಬಿಎಂಪಿ, ಬಿಎಂಆರ್‌ಸಿಎಲ್ ಸಂಬಂಧಿತ ಗುತ್ತಿಗೆದಾರರನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿಸಲು ನ್ಯಾಯಾಲಯವು ಆದೇಶಿಸಿದೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. 

ಈ ಘಟನೆ ಮಾಸುವ ಮುನ್ನವೇ ಗುರುವಾರ ಬ್ರಿಗೇಡ್ ರಸ್ತೆಯಲ್ಲಿ ರಸ್ತೆ ಗುಂಡಿ ನಿರ್ಮಾಣಗೊಂಡಿದ್ದು, ಬೈಕ್ ಸವಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಎರಡೂ ಪ್ರಕರಣಗಳನ್ನು ಆಧರಿಸಿ ನ್ಯಾಯಾಲಯವು ಈಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

Similar News