ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಶಾಸಕ ಯು.ಟಿ. ಖಾದರ್
Update: 2023-01-15 14:20 GMT
ಮಂಗಳೂರು: ನೇತ್ರಾವತಿ ಸೇತುವೆಯಲ್ಲಿ ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದಾರೆ.
ಈ ಸಂದರ್ಭ ಆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಶಾಸಕ ಹಾಗೂ ವಿಪಕ್ಷ ಉಪ ನಾಯಕರ ಯು.ಟಿ ಖಾದರ್ ಅವರು ಗಾಯಾಳು ಬೈಕ್ ಸವಾರನನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.