ರಾಜ್ಯದಲ್ಲಿ ಚಳಿ ಹೆಚ್ಚಳ: 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Update: 2023-01-15 13:20 GMT

ಬೆಂಗಳೂರು, ಜ.15: ರಾಜ್ಯದಲ್ಲಿ ವಿಪರೀತ ಚಳಿ ವಾತಾವರಣವಿದ್ದು, ಬಾಗಲಕೋಟೆ, ವಿಜಯಪುರ, ಮೈಸೂರು, ಬಳ್ಳಾರಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಬಾಗಲಕೋಟೆಯಲ್ಲಿ 8.2, ಮೈಸೂರು 9.4, ವಿಜಯಪುರ 9.8 ಡಿಗ್ರಿ ಸೆಲ್ಸಿಯಸ್ಸ್ ಇದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಶೀತ ಮಾರುತಗಳು ಬೀಸುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಕನಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 5 ರಿಂದ 7 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.   

Similar News