ಎಂ.ಎಂ. ಹಾಜಿ ನಿಧನ
Update: 2023-01-16 03:38 GMT
ಮಂಗಳೂರು: ಸುಮಾರು 60 ವರ್ಷಗಳಿಂದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನಲ್ಲಿ ಹಣ್ಣು ಹಂಪಲು ವ್ಯಾಪಾರಿಯಾಗಿದ್ದ ಎಂ.ಎಂ. ಹಾಜಿ ಇಂದು ನಿಧನರಾಗಿದ್ದಾರೆ.
ಅವರಿಗೆ 83 ವರ್ಷ ವಯಸ್ಸಾಗಿತ್ತು.
ಅವರು ಬಿಜೈನ ಬದ್ರಿಯಾ ಮಸೀದಿಯಲ್ಲಿ ಸುಮಾರು 30 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಆರು ಮಂದಿ ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.