'ನಾ ನಾಯಕಿ ಸಮಾವೇಶ': ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್ ನಿಂದ ಅದ್ದೂರಿ ಸ್ವಾಗತ
Update: 2023-01-16 07:50 GMT
ಬೆಂಗಳೂರು, ಜ.16: ನಗರದ ಅರಮನೆ ಮುಖ್ಯ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿರುವ 'ನಾ ನಾಯಕಿ ಸಮಾವೇಶ'ದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಮಧ್ಯಾಹ್ನ ದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದರು.
ಈ ಸಂದರ್ಭ ಪ್ರಿಯಾಂಕಾ ಗಾಂಧಿಯವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಇನ್ನಿತರ ನಾಯಕರು ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.