ರಸ್ತೆಗಿಳಿದ ಕೆಎಸ್ಸಾರ್ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್ಸಾರ್ಟಿಸಿ)ನಿಗಮದ ಮೊದಲ ಅಂತರ್ ಜಿಲ್ಲಾ ಎಲೆಕ್ಟ್ರಿಕ್ ಬಸ್ ಗೆ ಸೋಮವಾರ ಅಧಿಕೃತ ಚಾಲನೆ ಸಿಕ್ಕಿದ್ದು, ಕಳೆದ ಒಂದು ವಾರದಿಂದ ಡಿಪೋನಲ್ಲೇ ಪ್ರಾಯೋಗಿಕವಾಗಿ ಓಡಾಟ ನಡೆಸುತ್ತಿದ್ದ ಕೆಎಸ್ಸಾರ್ಟಿಸಿ ಎಲೆಕ್ಟ್ರಿಕ್ ಬಸ್ಗಳು ಇಂದು ರಸ್ತೆಗೆ ಇಳಿದಿವೆ.
ಮೆಜೆಸ್ಟಿಕ್ ಕೆಎಸ್ಆರ್ಟಿಸಿ ನಿಲ್ದಾಣದ ಡಿಸಿ ಚಂದ್ರಶೇಖರ್ ಹಾಗೂ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಲಕ್ಷ್ಮಣ್ ಅವರು ಮೆಜೆಸ್ಟಿಕ್ ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಬಸ್ಗೆ ಚಾಲನೆ ನೀಡಿದ್ದಾರೆ. ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ.
ಎಲೆಕ್ಟ್ರಿಕ್ ಬಸ್ ವಿಶೇಷತೆ ಏನು?:
'ಎರಡೂವರೆ ಗಂಟೆ ಚಾರ್ಜ್ ಮಾಡಿದರೆ 300 ಕಿ.ಮೀ ಕ್ರಮಿಸುವಷ್ಟು ಸಾಮಥ್ರ್ಯವನ್ನು ಎಲೆಕ್ಟ್ರಿಕ್ ಬಸ್ ಹೊಂದಿದೆ. ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಿಂದ ಕೂಡಿದ್ದು, ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಸಲಾಗಿದೆ. ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರೀಚಾರ್ಜ್ ಆಗುವ ರಿ ಜನರೇಟಿವ್ ಸಿಸ್ಟಮ್ ಇದಾಗಿದೆ. ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ಸ್ ಇದೆ. ಮನರಂಜನೆಗಾಗಿ ಬಸ್‍ನಲ್ಲಿ ಎರಡು ಟಿವಿ ಅಳವಡಿಕೆ ಮಾಡಲಾಗಿದೆ. ಬಸ್‍ನಲ್ಲಿ 43+2 ಆಸನ ಸಾಮಥ್ರ್ಯ ಹೊಂದಿದ್ದು, ಬಸ್ ಸಂಪೂರ್ಣ ಸೆನ್ಸಾರ್ ಹಿಡಿತದಲ್ಲಿರುತ್ತದೆ. ಪ್ರಮುಖವಾಗಿ ರಾಜ್ಯದಲ್ಲಿ ಪರಿಸರ ಸ್ನೇಹಿ ಬಸ್‍ಗಳ ಕಾರ್ಯಾಚರಣೆ ಚಿಂತನೆಗೆ, ಯೋಜನೆ ರೂಪಿಸಲು ಇದು ನಾಂದಿ ಹಾಡಲಿದೆ' ಎಂದು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ತಿಳಿಸಿದ್ದಾರೆ.
First Departure of EV Power Plus Bus pic.twitter.com/pFFBhkMouC
— KSRTC (@KSRTC_Journeys) January 16, 2023