ಮೆಹರುನ್ನಿಸಾ ಬಿಕರ್ನಕಟ್ಟೆ

Update: 2023-01-17 05:33 GMT

ಮಂಗಳೂರು, ಜ.17: ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್ ಅವರ ಸಹೋದರಿ, ಬಿಕರ್ನಕಟ್ಟೆ ನಿವಾಸಿ ಮೆಹರುನ್ನಿಸಾ(80) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ಇಂದು ಸಂಜೆ ಬಿಕರ್ನಕಟ್ಟೆ ಮಸೀದಿಯ ಖಬರಸ್ಥಾನದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Similar News

ಹರಿಶ್ಚಂದ್ರ
ವಿಮಲ ಭಟ್