ಕುಂದಗೋಳ | ರಸ್ತೆ ಅಪಘಾತ: ಬೈಕ್ ಸವಾರ ಸಾವು
Update: 2023-01-27 08:44 GMT
ಕುಂದಗೋಳ: ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಕುಬಿಹಾಳ ಗ್ರಾಮದ ಈರಪ್ಪ ಮಂಟೂರ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈರಪ್ಪ ಮಂಟೂರ ಅವರು ಕಳೆದ ಬುಧವಾರ ಹಂಚಿನಾಳ ಗ್ರಾಮದ ಸರಕಾರಿ ಶಾಲೆಯ ಹತ್ತಿರ ಬೈಕ್ ಸ್ಕಿಡ್ ಆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ
ಮಂಟೂರ ಗ್ರಾಮದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕುಬಿಹಾಳ ಗ್ರಾಮದಿಂದ ಕುಂದಗೋಳ ಪಟ್ಟಣದ ತಹಶೀಲ್ದಾರರ ಕಚೇರಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.