ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

Update: 2023-01-27 18:55 GMT

ಧಾರವಾಡ: ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯಲ್ಲಿ ಸರಕಾರಿ ಸಮಾರಂಭದ ಜತೆಗೆ ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊಸದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಶುಕ್ರವಾರ ರಾತ್ರಿ ಹುಬ್ಬಳ್ಳಿಗೆ ಬಂದಿಳಿದರು. 

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ರಾತ್ರಿ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ಯವ್ಯ ಹೂಡಲಿರುವ ಅಮಿತ್‌ ಶಾ, ಶನಿವಾರ ಹುಬ್ಬಳ್ಳಿ, ಧಾರವಾಡ ಹಾಗೂ ಕುಂದಗೋಳದಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬೆಳಗಾವಿಗೆ ತೆರಳಲಿದ್ದಾರೆ.

Similar News