ಉಡುಪಿ, ಕಾಪು ಸಹಿತ ರಾಜ್ಯದ 100 ಕ್ಷೇತ್ರಗಳಲ್ಲಿ ಸ್ಪರ್ಧೆ: ಎಸ್‌ಡಿಪಿಐ

Update: 2023-01-31 18:19 GMT

ಉಡುಪಿ: ಮುಂದಿನ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಯಲ್ಲಿ ಎಸ್‌ಡಿಪಿಐ ಪಕ್ಷವು ಉಡುಪಿ ಜಿಲ್ಲೆಯ ಉಡುಪಿ ಮತ್ತು ಕಾಪು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಂಟೂ ಕ್ಷೇತ್ರ ಸೇರಿದಂತೆ ರಾಜ್ಯದ 100 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆಂದು ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೋಡ್ಲಿಪೇಟೆ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾಪು ಕ್ಷೇತ್ರ ಅಭ್ಯರ್ಥಿಯಾಗಿ ಹನೀಫ್ ಮೂಳೂರು ಸಹಿತ ಹತ್ತು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಘೋಷಿಸಲಾಗಿದೆ. ಅದರ ಜೊತೆಗೆ ಪಕ್ಷ ಸ್ಪರ್ಧಿಸಲಿರುವ 44 ಕ್ಷೇತ್ರಗಳ ಮೊದಲ ಪಟ್ಟಿಯನ್ನೂ ಕೂಡ ಬಿಡುಗಡೆ ಮಾಡಲಾಗಿದೆ. ದ್ವಿತೀಯ ಪಟ್ಟಿಯಲ್ಲಿ ಉಡುಪಿ ಕ್ಷೇತ್ರ ಅಭ್ಯರ್ಥಿಯ ಹೆಸರನ್ನು ಘೋಷಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲಿ, ಕಾಪು ಕ್ಷೇತ್ರದ ಅಭ್ಯರ್ಥಿ ಹನೀಫ್ ಮೂಳೂರು, ರಾಜ್ಯ ಮುಖಂಡ ನವಾಝ್ ಉಳ್ಳಾಲ್, ಉಡುಪಿ ಜಿಲ್ಲಾ ಉಪಾಧ್ಯಕ್ಷ ಖಲೀಲ್ ಅಹ್ಮದ್, ರಝಾಕ್ ಉಪಸ್ಥಿತರಿದ್ದರು.

Similar News