ಮಂಗಳೂರು: ನಗರ, ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಮುಷ್ಕರ ಆರಂಭ
Update: 2023-02-01 07:48 GMT
ಮಂಗಳೂರು, ಫೆ.1: ಶೀಘ್ರವೇ ನೇರ ಪಾವತಿ ಮತ್ತು ನೇರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧ ನಗರ ಮತ್ತು ಸ್ಥಳೀಯಸಂಸ್ಥೆಗಳಲ್ಲಿ ಹೊರಗುತ್ತಿಗೆಯಲ್ಲಿ ದುಡಿಯುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಕಾರ್ಮಿಕರು, ಡಾಟಾ ಎಂಟ್ರಿ ಆಪರೇಟರ್, ಒಳ ಚರಂಡಿ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಮಂಗಳೂರಿನಲ್ಲಿ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಆಶ್ರಯದಲ್ಲಿ ಮಂಗಳೂರಿನ ತಾಲೂಕು ಆಡಳಿತ ಸೌಧದ ಮುಂದೆ ಕೈಗೊಂಡಿರುವ ಎರಡು ದಿನಗಳ ಮುಷ್ಕರಕ್ಕೆ ಬುಧವಾರ ಬೆಳಗ್ಗೆ ಹೊರಗುತ್ತಿಗೆ ನೌಕರರ ಸಂಘದ ಸಂಚಾಲಕ ಅಣ್ಣಪ್ಪ ಚಾಲನೆ ನೀಡಿದರು.
ಸಫಾಯಿ ಕರ್ಮಚಾರಿಗಳ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್, ಕೋಶಾಧಿಕಾರಿ ಕೃಷ್ಣ ಪೂಜಾರಿ, ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಚೆನ್ನಕೇಶವ ಮುಷ್ಕರದ ನೇತೃತ್ವ ವಹಿಸಿದ್ದಾರೆ.