ಬೆಂಗಳೂರು | ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ: ತಾಯಿ, ಮಗಳು ಮೃತ್ಯು

Update: 2023-02-01 11:13 GMT

ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ಸಾವನ್ನಪ್ಪಿರುವ ಘಟನೆ ನಗರದ ಹೊರವಲಯ ಬನ್ನೇರುಘಟ್ಟ ಸಮೀಪದ ಬಾಳಮಾರು ದೊಡ್ಡಿ ಬಳಿ ಬುಧವಾರ ವರದಿಯಾಗಿದೆ.

ಮೃತರನ್ನು ಬಳ್ಳಾರಿ ಮೂಲದ ತಾಯಿ ಗಾಯತ್ರಿ ಕುಮಾರ್ (47) ಮತ್ತು ಮಗಳು ಸಮತಾ ಕುಮಾರ್ (16) ಎಂದು ಗುರುತಿಸಲಾಗಿದೆ. ಇವರು ಕಳೆದ 20 ವರ್ಷದಿಂದ ಬೆಂಗಳೂರಿನಲ್ಲಿ ವಾಸವಿದ್ದರೆನ್ನಲಾಗಿದೆ. 

ತಾಯಿ ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ ಕನಕಪುರ ರಸ್ತೆ ಮಾರ್ಗವಾಗಿ ಬನ್ನೇರುಘಟ್ಟಕ್ಕೆ ಬರುತ್ತಿದ್ದರು. ಈ ವೇಳೆ ಕಾಂಕ್ರೀಟ್ ಮಿಕ್ಸರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಮಗುಚಿ ಬಿದ್ದಿದೆ ಎನ್ನಲಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ತಾಯಿ, ಮಗಳು ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

 

Similar News