ಎಚ್.ವಿಶ್ವನಾಥ್ ನಿವಾಸಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಕಾಂಗ್ರೆಸ್ ನಾಯಕರು
Update: 2023-02-16 17:39 GMT
ಮೈಸೂರು,ಫೆ.16: ವಿಧಾನಪರಿಷತ್ ಸದಸ್ಯ ಬಿಜೆಪಿ ಮುಖಂಡ ಎಚ್.ವಿಶ್ವನಾಥ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದರು.
ಕೆ.ಆರ್.ನಗರದಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಗುರುವಾರ ಕೆ.ಆರ್.ನಗರಕ್ಕೆ ತೆರಳಿದ ಡಿ.ಕೆ.ಶಿವಕುಮಾರ್, ಕೆ.ಆರ್.ನಗರದಲ್ಲಿರುವ ಎಚ್.ವಿಶ್ವನಾಥ್ ಅವರ ಮನೆಗೆ ಭೇಟಿ ನೀಡಿ ಚಹಾ ಸೇವಿಸಿದರು.
ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಮಾಜಿ ಸಚಿವರುಗಳಾದ ಡಾ.ಎಚ್.ಸಿ.ಮಹದೇವಪ್ಪ, ಎಚ್.ಎಂ.ರೇವಣ್ಣ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರ್ ನಾಥ್, ಸೂರಜ್ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.