ಕಾಸರಗೋಡು: ಸರಕಾರಿ ಶಾಲೆಯಲ್ಲಿ ರ‍್ಯಾಗಿಂಗ್ ಪ್ರಕರಣ; ವಿದ್ಯಾರ್ಥಿಗೆ ಹಲ್ಲೆ
Update: 2023-02-18 11:21 GMT
ಕಾಸರಗೋಡು: ಪೈವಳಿಕೆ ಸರಕಾರಿ ಶಾಲೆಯಲ್ಲಿ ರ‍್ಯಾಗಿಂಗ್ ಪ್ರಕರಣವೊಂದು ನಡೆದಿದ್ದು, ಪ್ಲಸ್ ಟು ವಿದ್ಯಾರ್ಥಿಯೋರ್ವನ ಮೇಲೆ ಸುಮಾರು 15ರಷ್ಟು ವಿದ್ಯಾರ್ಥಿಗಳು ಹಲ್ಲೆ ಮಾಡಿರುವುದಾಗಿ ದೂರಲಾಗಿದೆ.
ಪೈವಳಿಕೆ ಕಾಯರ್ ಕಟ್ಟೆ ಜಿ.ಎಚ್.ಎಸ್ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ಅದ್ನಾನ್ (17) ಹಲ್ಲೆಗೆ ಒಳಗಾದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿಯ ತಲೆ ಮತ್ತು ಹಣೆಗೆ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ ಎಂದು ದೂರಲಾಗಿದೆ.
ಶುಕ್ರವಾರ ಮಧ್ಯಾಹ್ನ ತರಗತಿ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅದ್ನಾನಿಗೆ ಪ್ಲಸ್‌ಟುವಿನ ಇನ್ನೊಂದು ಬ್ಯಾಚಿನ ವಿದ್ಯಾರ್ಥಿಗಳ ತಂಡ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.
ಗಾಯಗೊಂಡ ವಿದ್ಯಾರ್ಥಿಯನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.