ರೋಹಿಣಿ ಸಿಂಧೂರಿಯ ಖಾಸಗಿ ಚಿತ್ರಗಳನ್ನು ಪ್ರಕಟಿಸಿ ಗಂಭೀರ ಆರೋಪ ಮಾಡಿದ ಡಿ. ರೂಪಾ
ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಸಾಮಾಜಿಕ ತಾಣದಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ರೂಪಾ ಅವರು ರೋಹಿಣಿಯವರ ಖಾಸಗಿ ಚಿತ್ರಗಳನ್ನು ಪ್ರಕಟಿಸಿ, ಉನ್ನತ ಅಧಿಕಾರಿಯೋರ್ವರು ತಮ್ಮ ಪುರುಷ ಸಹೋದ್ಯೋಗಿಗಳಿಗೆ ಇಂತಹಾ ಫೋಟೊ ಕಳುಹಿಸುವ ಔಚಿತ್ಯವೇನು? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಫೇಸ್ಬುಕ್ ಖಾತೆಯಲ್ಲಿ ಅವರು, "ಈ ರೀತಿಯ ಪಿಕ್ಚರ್ಸ್ normal ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳ one to one ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ private matter ಆಗುವುದಿಲ್ಲ ಐಎಎಸ್ SERVICE CONDUCT RULES ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ investigate ಮಾಡಬಹುದು. ಸಲೂನ್ haircut chitra, ತಲೆದಿಂಬು ಇತ್ತು ಮಲಗಿ ತೆಗೆದಿರುವ ಚಿತ್ರ. Normal ಅನ್ನಿಸಬಹುದು ಕೆಲವರಿಗೆ. ಕಳಿಸಿರುವ ಸನ್ನಿವೇಶ speaks otherwise." ಎಂದು ಬರೆದಿದ್ದಾರೆ.
ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಹಾಗೂ ರೋಹಿಣಿ ಸಿಂಧೂರಿ ಸಂಧಾನ ಯತ್ನ ವಿಚಾರ ಬಗ್ಗೆಯೂ ಪೋಸ್ಟ್ ಮಾಡಿದ್ದ ಅವರು ರೋಹಿಣಿ ಸಿಂಧೂರಿ ವಿರುದ್ಧ 19 ಆರೋಪಗಳು ಪಟ್ಟಿ ಮಾಡಿದ್ದರು.
ಇನ್ನು ರೂಪ ಅವರ ಫೇಸ್ ಬುಕ್ ಪೋಸ್ಟ್ ಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. "ಖಾಸಗಿತನ ಮೂಲಭೂತ ಹಕ್ಕು ಮೇಡಮ್. ಅದನ್ನು ಹೀಗೆ ಪ್ರಚಾರ ಮಾಡುವುದು ಸರಿಯೇ.?" ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಯಿಸಿದ್ದಾರೆ.