ಕಾರು ಢಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು
Update: 2023-02-21 16:12 GMT
ಕೋಟ, ಫೆ.21: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತೆಕ್ಕಟ್ಟೆಯ ಗಣೇಶ್ ಕ್ಲೋತ್ ಸ್ಟೋರ್ಸ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫೆ.20ರಂದು ಸಂಜೆ ನಡೆದಿದೆ.
ಮೃತರನ್ನು ತೆಕ್ಕಟ್ಟೆಯ ಅಶೋಕ್ ಮೊಗವೀರ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟುತ್ತಿದ್ದ ಪಾದಾಚಾರಿ ಅಶೋಕ್ ಮೊಗವೀರ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.