ನಗರ ಕೇಂದ್ರ ಗ್ರಂಥಾಲಯದಲ್ಲಿ ಓದುಗರಿಗೆ ಉತ್ತಮ ಸೇವೆ: ಸುಮಿತ್ರಾ ಆರ್.ನಾಯಕ್

Update: 2023-03-04 15:42 GMT

ಉಡುಪಿ: ಪ್ರತಿದಿನ ಗ್ರಂಥಾಲಯಕ್ಕೆ  ಸಾರ್ವಜನಿಕ ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಡುಪಿ ಜಿಲ್ಲೆಯ ನಾಗರೀಕರು ಮತ್ತು ಪ್ರಜ್ಞಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು, ಈ ಮೂಲಕ ಉಡುಪಿ ನಗರ ಕೇಂದ್ರ ಗ್ರಂಥಾಲಯವು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದು ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದ್ದಾರೆ.

ಉಡುಪಿ ನಗರ ಕೇಂದ್ರ ಗ್ರಂಥಾಲಯಕ್ಕೆ ಉಪಯೋಗ ವಾಗುವಂತೆ, ಪುಸ್ತಕಗಳನ್ನು ಇಡುವ ಡಬಲ್ ರ್ಯಾಕ್‌ಗಳನ್ನು ವ್ಯೆಯಕ್ತಿಕವಾಗಿ ಕೊಡುಗೆ ನೀಡಿ ಅವರು ಮಾತನಾಡುತಿದ್ದರು. ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಮಕ್ಕಳಿಗಾಗಿ 50 ಹೊಸ ಪುಸ್ತಕಗಳನ್ನು  ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು. 

ಕಾರ್ಯಕ್ರಮದಲ್ಲಿ ಡಿಜಿಟಲ್ ಗ್ರಂಥಾಲಯದ ಡಾ. ಸತೀಶ್‌ಕುಮಾರ್ ಹೊಸಮನಿ ಮಾತನಾಡಿ,  ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರು ಈ ರೀತಿ ಗ್ರಂಥಾಲಯಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಇತರರಿಗೆ ಮಾದರಿ ಎಂದರು. ಇಲ್ಲಿನ ಜನತೆ ಸುಸಂಸ್ಕೃತರು ಮತ್ತು ಪ್ರಜ್ಞಾವಂತರು. ಪುಸ್ತಕಗಳು ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕ. ಪುಸ್ತಕ ಸಂಸ್ಕೃತಿ ಬೆಳೆಸಲು ಇಂತಹ ಅತ್ಯುತ್ತಮ ಪೀಠೋಪಕರಣ, ಪುಸ್ತಕಗಳನ್ನು ಕೊಡುಗೆ ನೀಡುವು ದರ ಮೂಲಕ ಗ್ರಂಥಾಲಯದ ಅಭಿವೃದ್ಧಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ರಾಘವೇಂದ್ರ, ಜಿಲ್ಲಾ ಕೇಂದ್ರ ಗ್ರಂಥಾಲಯ ಮಂಗಳೂರಿನ ಮುಖ್ಯ ಗ್ರಂಥಾಲಯಾಧಿಕಾರಿ ಗಾಯತ್ರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿಯ ಜಯಶ್ರೀ ಎಂ. ಉಪಸ್ಥಿತರಿದ್ದರು.  

ಉಡುಪಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಕುಂತಳ ಕುಂದರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 

Similar News