ಟೆಂಡರ್ ಗಾಗಿ ಲಂಚ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ

Update: 2023-03-06 06:17 GMT

ಬೆಂಗಳೂರು, ಮಾ.6: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಬಂಧನದ ಭೀತಿಯಲ್ಲಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಕೋರಿ ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ವಿರೂಪಾಕ್ಷಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಅವರ ಪರ ವಕೀಲರು ಮನವಿ ಮಾಡಿದ್ದಾರೆ.

ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠವು ಮಂಗಳವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದೆ.

40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ವಿರೂಪಾಕ್ಷಪ್ಪ ಅವರ ಮಗ, ಬೆಂಗಳೂರು ಜಲಮಂಡಳಿಯ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್‌ ಮಾಡಾಳ್‌ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದರು. ಗುರುವಾರ ತಡ ರಾತ್ರಿ ಬೆಂಗಳೂರು ತಲುಪಿದ್ದ ಮಾಡಾಳ್‌ ವಿರೂಪಾಕ್ಷಪ್ಪ ಬಳಿಕ ತಲೆಮರೆಸಿಕೊಂಡಿದ್ದಾರೆ. ಲೋಕಾಯುಕ್ತ ಪೊಲೀಸರು ಹಲವು ತಂಡಗಳಲ್ಲಿ ಅವರಿಗಾಗಿ ಶೋಧ ನಡೆಸುತ್ತಿದ್ದಾರೆ.

ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್‌ ವಿರೂಪಾಕ್ಷಪ್ಪ ಮೊದಲನೇ ಆರೋ‍ಪಿಯಾಗಿದ್ದು, ಅವರಿಗಾಗಿ ಲೋಕಾಯುಕ್ತ ಪೊಲೀಸರು ವಿವಿಧೆಡೆ ಶೋಧ ನಡೆಸುತ್ತಿದ್ದಾರೆ.

Similar News