ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿ ಮೃತ್ಯು
Update: 2023-03-08 18:12 GMT
ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್ ನಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ ವರದಿಯಾಗಿದೆ.
ಅಬ್ದುಲ್ ಖಾದಿರ್ (61) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕೇರಳದಿಂದ ಬೆಂಗಳೂರಿಗೆ ಬಂದಿದ್ದ ಅವರು ಯಶವಂತಪುರದಿಂದ ಮೆಜೆಸ್ಟಿಕ್‌ಗೆ ಬಿಎಂಟಿಸಿ ಬಸ್‌ನಲ್ಲಿ ತೆರಳುತ್ತಿದ್ದರೆನ್ನಲಾಗಿದ್ದು, ಈ ವೇಳೆ ಕುಳಿತಿದ್ದ ಸೀಟ್ ಮೇಲೆಯೇ ಕುಸಿದು ಬಿದ್ದಿದ್ದಾರೆ. ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಬಸ್ ನಲ್ಲಿಯೇ ಕೊನೆಯುಸಿರೆಳೆದಿದ್ದಾರೆ.