ಮಾ.12ರ ಉಡುಪಿ ಜಿಲ್ಲಾ ಮಹಿಳಾ ಸಮಾವೇಶ: ಉದ್ಘಾಟನೆಗೆ ಗೋವಾ ಸಿಎಂ ಡಾ.ಸಾವಂತ್
Update: 2023-03-10 15:04 GMT
ಉಡುಪಿ, ಮಾ.10: ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಮಹಿಳಾ ಸಮಾವೇಶವು ಮಾ.12 ರವಿವಾರ ಅಪರಾಹ್ನ 3 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ.
ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರು ಈ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದು, ಖ್ಯಾತ ಚಲನಚಿತ್ರ ನಟಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಾಳವಿಕಾ ಅವಿನಾಶ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲೆಯ ಸಚಿವರು, ಶಾಸಕರು ಹಾಗೂ ಪಕ್ಷದ ರಾಜ್ಯ ಮತ್ತು ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.