ಕಾಪು : ಆಂಬುಲೆನ್ಸ್ ಢಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ
Update: 2023-03-12 12:20 GMT
ಕಾಪು: ಆಂಬುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ರವಿವಾರ ಮಧ್ಯಾಹ್ನ ಕಾಪುವಿನಲ್ಲಿ ನಡೆದಿದೆ.
ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ರವಿವಾರ ಮಧ್ಯಾಹ್ನ ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಮಂಗಳೂರು-ಉಡುಪಿ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಯಿದ್ದು, ಆಂಬುಲೆನ್ಸ್ ಚಾಲಕ ವಿರುದ್ಧ ದಿಕ್ಕಿನಲ್ಲಿ ಆಂಬುಲೆನ್ಸ್‌ನ್ನು ಚಲಾಯಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.