ರಾಮನಗರ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ‌ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ

ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

Update: 2023-03-14 04:43 GMT

ರಾಮನಗರ, ಮಾ.14: ಬೆಂಗಳೂರು- ಮೈಸೂರು ಹೆದ್ದಾರಿಯ ಅಪೂರ್ಣ ಕಾಮಗಾರಿ ನಡುವೆಯೇ ಟೋಲ್ ಸಂಗ್ರಹ ಆರಂಭಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು‌.

‌ಟೋಲ್ ಸಂಗ್ರಹ ವಿರೋಧಿಸಿ ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು, ಬಿಜೆಪಿ ಸರಕಾರ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಶೇಷಗಿರಿಹಳ್ಳಿ, ಹೆಜ್ಜಾಲ ಬಳಿ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಹೆಜ್ಜಾಲ ಬಳಿ ಶಾಲಾ ವಿದ್ಯಾರ್ಥಿಗಳಿಗೆ ಸ್ಕೈ ವಾಕ್ ನಿರ್ಮಿಸಿಲ್ಲ. ಹೀಗೆ ಅಪೂರ್ಣ ಕಾಮಗಾರಿ ನಡುವೆಯೇ ಹೆದ್ದಾರಿ ಟೋಲ್ ಆರಂಭಿಸಲಾಗಿದೆ ಎಂದು ದೂರಿದರು.

ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ರಾಮನಗರಕ್ಕೆ ಕರೆದೊಯ್ದರು.

Similar News