ಮೂಡಿಗೆರೆ ಬಿಜೆಪಿಯಲ್ಲಿ ಮುಂದುವರಿದ ಭಿನ್ನಮತ: ಬಿಎಸ್ ವೈ ಕಾರಿಗೆ ಮುತ್ತಿಗೆ, ವಿಜಯ ಸಂಕಲ್ಪ ಯಾತ್ರೆ ರದ್ದು

ಎಂ.ಪಿ. ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಪಟ್ಟು

Update: 2023-03-16 15:02 GMT

ಮೂಡಿಗೆರೆ, ಮಾ. 16: ಮುಂಬರಲಿರುವ ವಿಧಾನಸಭೆ ಚುನಾವಣೆಗೆ ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ  ಟಿಕೆಟ್‌ ನೀಡಬಾರದೆಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕಾರಿಗೆ ಮುತ್ತಿಗೆ ಹಾಕಿರುವ ಘಟನೆ ವರದಿಯಾಗಿದೆ. 

ಇಂದು ಪಟ್ಟಣದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆ ವೇಳೆ ಬ್ಯಾನರ್, ಬಂಟಿಂಗ್ಸ್‌ ಹಿಡಿದು ಯಡಿಯೂರಪ್ಪ ಅವರ ಕಾರಿಗೆ ಮುತ್ತಿಗೆ ಹಾಕಿ ರಸ್ತೆ ಮಧ್ಯೆಯೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದರಿಂದ ಕೋಪೊಗೊಂಡ ಯಡಿಯೂರಪ್ಪ ಅವರು ವಿಜಯ ಸಂಕಲ್ಪ ಯಾತ್ರೆ ರದ್ದುಗೊಳಿಸಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ತೆರಳಿದ್ದಾರೆ. 

ಎಂ.ಪಿ.ಕುಮಾರಸ್ವಾಮಿ ವಿರುದ್ಧ ಆಕ್ರೋಶ

'ಹಾಲಿ ಶಾಸಕರು ಕಾರ್ಯಕರ್ತರ ಪರವಾಗಿ ಕೆಲಸ ಮಾಡಿಲ್ಲ. ಕ್ಷೇತ್ರದ ಅಭಿವೃದ್ಧಿ ಯಲ್ಲಿ ಕುಂಠಿತವಾಗಿದೆ. ಇವರು ಮತ್ತೆ ಗೆದ್ದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಮರೀಚಿಕೆಯಾಗುತ್ತೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕಾರ್ಯಕರ್ತರು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ತೀರ್ಮಾನಿಸಿದ್ದರು. 

ಇದನ್ನೂ ಓದಿ: ಎಂ.ಪಿ. ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಪಟ್ಟು: ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಮೂಡಿಗೆರೆ ಬಿಜೆಪಿಯಲ್ಲಿ ಅಸಮಾಧಾನ

Full View

Similar News