ಕಾರ್ಕಳ| ಕಳವು ಪ್ರಕರಣ: ಆರೋಪಿ ಬಂಧನ

Update: 2023-03-17 06:14 GMT

ಕಾರ್ಕಳ,ಮಾ.17: ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಎಂಬಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ ಮಾರುತಿ ನಗರದ ಚಂದ್ರಗೌಡ ಪಾಟೀಲ್(56) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ್ದ 5.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಫೆ.23ರಂದು ಪಾದೆಮನೆ ರಾಘವೇಂದ್ರ ಭಟ್ ಎಂಬವರ ಮನೆಯ ಕಪಾಟಿನ ಬಾಗಿಲು ತೆರೆದು ಸುಮಾರು ಐದೂವರೆ ಲಕ್ಷ ವೌಲ್ಯದ ಚಿನ್ನದ ಆಭರಣಗಳು ಮತ್ತು 5500ರೂ. ನಗದು ಕಳವು ಮಾಡಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ಎಸ್ಪಿ ಅಕ್ಷಯ ಹಾಕೆ ಸೂಚನೆಯಂತೆ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ಮಾರ್ಗದರ್ಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಸಿಬ್ಬಂದಿ ಗಿರೀಶ್, ಪ್ರಶಾಂತ್, ಅಶೋಕ್, ವಿಶ್ವನಾಥ್, ಗಣೇಶ್ ಮತ್ತು ರುಕ್ಮಿಣಿ ಈ ಕಾರ್ಯಾಚರಣೆ ನಡೆಸಿದ್ದು, ಎಸ್.ಪಿ ಕಚೇರಿಯ ದಿನೇಶ್ ಮತ್ತು ಶಿವಾನಂದ್ ಪತ್ತೆ ಕಾರ್ಯಕ್ಕೆ ಸಹಕರಿಸಿದ್ದಾರೆ. 

Similar News