ಮಾ.20ರಂದು ಕೆಎಸ್ಸಾರ್ಟಿಸಿ ‘ಅಂತರ್ ನಗರ’ ಎಲೆಕ್ಟ್ರಿಕ್ ಇವಿ ಪವರ್ ಪ್ಲಸ್ ಬಸ್ಸುಗಳ ಲೋಕಾರ್ಪಣೆ
Update: 2023-03-19 16:30 GMT
ಬೆಂಗಳೂರು, ಮಾ. 19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ‘ಅಂತರ್ ನಗರ’ ನೂತನ ಹವಾ ನಿಯಂತ್ರಿತ ಎಲೆಕ್ಟ್ರಿಕ್ ಇವಿ ಪವರ್ ಪ್ಲಸ್ ಬಸ್ಸುಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ನಾಳೆ(ಮಾ.20) ಮಧ್ಯಾಹ್ನ 1 ಗಂಟೆಗೆ ವಿಧಾನಸೌಧ ವೈಭವ ಪೇತ ಮೆಟ್ಟಿಲುಗಳ ಮೇಲೆ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಬಸ್‍ಗಳ ಲೋಕಾರ್ಪಣೆ ಮಾಡಲಿದ್ದು, ಸಾರಿಗೆ ಸಚಿವ ಶ್ರೀರಾಮುಲು, ಕೆಎಸ್ಸಾರ್ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಭಾಗವಹಿಸಲಿದ್ದು, ಶಿವಾಜಿನಗರ ಕ್ಷೇತ್ರದ ಶಾಸಕ ರಿಝ್ವಾನ್ ಅರ್ಶದ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಪಿ.ಸಿ.ಮೋಹನ್, ಕೆಎಸ್ಸಾರ್ಟಿಸಿ ಉಪಾಧ್ಯಕ್ಷ ಮೋಹನ್ ಮೆಣಸಿನಕಾಯಿ, ಇಲಾಖೆ ಕಾರ್ಯದರ್ಶಿ ಡಾ.ಎನ್. ವಿ.ಪ್ರಸಾದ್, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.