ದ್ವಿತೀಯ ಪಿಯುಸಿ ಪರೀಕ್ಷೆ: ರಾಜ್ಯಾದ್ಯಂತ ಆಂಗ್ಲ ಭಾಷಾ ಪರೀಕ್ಷೆಯಲ್ಲಿ 26ಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು
Update: 2023-03-23 15:08 GMT
ಬೆಂಗಳೂರು, ಮಾ.23: ದ್ವಿತೀಯ ಪಿಯುಸಿ ಪರೀಕ್ಷೆಯ ಆಂಗ್ಲ ಭಾಷಾ ಪರೀಕ್ಷೆಯು ಸೋಮವಾರದಂದು ನಡೆದಿದ್ದು, ಪರೀಕ್ಷೆಯಲ್ಲಿ ರಾಜ್ಯಾದ್ಯಂತ 26,881 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಪರೀಕ್ಷೆಗೆ 6,61,476 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು.
ಅವರಲ್ಲಿ 6,34,595 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಶಿಕ್ಷಣ ಇಲಾಖೆಯು ತಿಳಿಸಿದೆ.