ಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲೂ ನಾನು ಸಿದ್ಧ: ರಾಹುಲ್ ಗಾಂಧಿ
Update: 2023-03-24 14:26 GMT
ಹೊಸದಿಲ್ಲಿ: ತಮ್ಮ ಲೋಕಸಭಾ ಸದಸ್ಯತ್ವ ಸ್ಥಾನ ರದ್ದುಗೊಳ್ಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ವಯನಾಡು ಸಂಸದರಾಗಿದ್ದ ರಾಹುಲ್ ಗಾಂಧಿ ಅವರು "ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಅದಕ್ಕಾಗಿ ಯಾವುದೇ ಬೆಲೆ ತೆರಲೂ ನಾನು ಸಿದ್ಧ" ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ಕಾಂಗ್ರೆಸ್ ಸೇರಿದಂತೆ ಹಲವು ಸಾಮಾಜಿಕ ಚಿಂತಕರು ಖಂಡಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಟ್ವೀಟ್ ಮಾಡಿ, ನಾವು ಪ್ರಧಾನಿ ನರೇಂದ್ರ ಮೋದಿಯಂತಹ ಹೇಡಿ ಸರ್ವಾಧಿಕಾರಿಗಳಿಗೆ ಹೆದರುವುದಿಲ್ಲ ಎಂದಿದ್ದಾರೆ.
मैं भारत की आवाज़ के लिए लड़ रहा हूं।
— Rahul Gandhi (@RahulGandhi) March 24, 2023
मैं हर कीमत चुकाने को तैयार हूं।