ಗ್ರಾಮಗಳಲ್ಲಿ ಸ್ಮಶಾನ ಸ್ಥಳದ ಜಮೀನಿಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್

Update: 2023-03-24 13:49 GMT

ಉಡುಪಿ : ಜಿಲ್ಲೆಯ ಎಲ್ಲಾ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರಕಾರದ ಉದ್ದೇಶವಾಗಿದ್ದು, ಸಾರ್ವಜನಿಕರಿಗೆ ಅವರ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಸ್ಮಶಾನ ನಿರ್ಮಾಣಕ್ಕೆ ಜಮೀನಿನ ಅವಶ್ಯಕತೆ ಇದ್ದಲ್ಲಿ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ತಹಶೀಲ್ದಾರರು ಅಥವಾ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಬೇಡಿಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಸ್ಮಶಾನ ಭೂಮಿ ಅವಶ್ಯಕತೆಯ ಬಗ್ಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಮನವಿಯ ಜೊತೆಗೆ ಹೆಸರು, ತಂದೆಯ ಹೆಸರು, ಆಧಾರ್ ಕಾರ್ಡ್ ನಂಬರ್, ಗ್ರಾಮದ ಹೆಸರು, ನಗರ, ತಾಲೂಕು ಹಾಗೂ ಜಿಲ್ಲೆಗಳ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News