ವೈಟ್‍ಫೀಲ್ಡ್-ಕೆ.ಆರ್.ಪುರ ಮೆಟ್ರೋ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

Update: 2023-03-25 08:25 GMT

ಬೆಂಗಳೂರು, ಮಾ.23: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಬೆಂಗಳೂರಿನ ವೈಟ್​​ಫೀಲ್ಡ್​​ನಲ್ಲಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದರು.

ಕೆ.ಆರ್.ಪುರಂನಿಂದ ವೈಟ್‌ಫೀಲ್ಡ್‌ವರೆಗಿನ ನೂತನ ಮೆಟ್ರೋ ಮಾರ್ಗ 4,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 13.71 ಕಿಲೋಮೀಟರ್ ಇರುವ ನೂತನ ನೇರಳ ಮಾರ್ಗ 12 ಮೆಟ್ರೋ ನಿಲ್ದಾಣಗಳನ್ನು ಹೊಂದಿದೆ.

ಇನ್ನು ಮೋದಿ ಅವರು ಬೆಂಗಳೂರಿನಿಂದ ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

Similar News