ಪಡುಬಿದ್ರೆ: ಟ್ಯಾಂಕರ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ
Update: 2023-03-25 12:42 GMT
ಪಡುಬಿದ್ರೆ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಶನಿವಾರ ಸಂಜೆ ನಡೆದಿದೆ.
ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ.
ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರೆ ಕಡೆ ಸಾಗುತ್ತಿತ್ತು. ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕಿಗೆ ಢಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದು, ಬೈಕ್ ನಲ್ಲಿದ್ದವರು ಯಾರೆಂದು ಇನ್ನಷ್ಟೇ ತಿಳಿದು ಬರಬೇಕಿದೆ.