ಮಲ್ಪೆ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ವಶಕ್ಕೆ

Update: 2023-03-25 14:59 GMT

ಮಲ್ಪೆ, ಮಾ.25: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣವನ್ನು ಪೊಲೀಸರು ಮಾ.24ರಂದು ಬೆಳಗ್ಗೆ ನೇಜಾರು ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಂಡಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ ಪೋಸ್ಟ್‌ನಲ್ಲಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದ್ದು, ಈ ವೇಳೆ ಕೆಮ್ಮಣ್ಣು ಕಡೆಯಿಂದ ಸಂತೆಕಟ್ಟೆ ಕಡೆಗೆ ಸಂತೋಷ್, ಕಿರಣ್ ಲೋಬೋ ಹಾಗೂ ರೇಖಾ ಲೋಬೋ ಎಂಬವರು ಪ್ರಯಾಣಿಸುತ್ತಿದ್ದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಕಾರಿನ ಹಿಂಬದಿಯ ಡಿಕ್ಕಿಯಲ್ಲಿ ಒಟ್ಟು 4 ಲಕ್ಷ ರೂ. ಹಣ ಪತ್ತೆಯಾಗಿದೆ. ಈ ಬಗ್ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ ವಿಚಾರಿಸಿದಾಗ ಯಾವುದೇ ದಾಖಲಾತಿ ಇಲ್ಲ ಎಂಬುದು ತಿಳಿದುಬಂತು.  ಆ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಕ್ರಮಕ್ಕಾಗಿ ಹಣವನ್ನು ವಶಪಡಿಸಿಕೊಂಡು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Similar News