ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ. ಕೃಷ್ಣಪ್ಪ

Update: 2023-03-25 15:43 GMT

ಸುಳ್ಯ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಹೊಸ ಅಭ್ಯರ್ಥಿ ಘೋಷಿಸಲಾಗಿದೆ.

ಕಳೆದ ನಾಲ್ಕು ಅವಧಿಯಲ್ಲಿ ಸ್ಪರ್ಧಿಸಿದ್ದ ಡಾ.ರಘು ಬದಲಿಗೆ ಈ ಬಾರಿ ಕೆಪಿಸಿಸಿ ಸಂಯೋಜಕರಾಗಿರುವ ಜಿ.ಕೃಷ್ಣಪ್ಪ ಅವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಮೂಲತಃ ಸಕಲೇಶಪುರದ ಕೆರೋಡಿಯವರಾದ ಜಿ.ಕೃಷ್ಣಪ್ಪ ಅವರು ಪ್ರಸ್ತುತ ಕಡಬ ತಾಲೂಕಿನ ರಾಮಕುಂಜದಲ್ಲಿ ನೆಲೆಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಮೂಲಕ ಪ್ರಥಮ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಕೃಷ್ಣಪ್ಪ ಎಂ.ಎಸ್ಸಿ, ಎಂ.ಎ ಪದವೀಧರರು. ಕಾಲೇಜುನಲ್ಲಿರುವಾಗಲೇ ಎನ್‍ಎಸ್‍ಯುಐನಲ್ಲಿ ಸಕ್ರೀಯರಾಗಿದ್ದ ಕೃಷ್ಣಪ್ಪ ಯುವ ಕಾಂಗ್ರೆಸ್ ಮೂಲಕ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು ಎನ್‍ಎಸ್‍ಯುಐ ರಾಜ್ಯ ಕಾರ್ಯದರ್ಶಿ, ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಕೆಪಿಸಿಸಿ ಸದಸ್ಯರು, ಕೆಪಿಸಿಸಿ ಸಂಯೋಜಕರು ಆಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಜಿ.ಕೃಷ್ಣಪ್ಪ ಕಳೆದ 4 ವರ್ಷಗಳಿಂದ ಸುಳ್ಯ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಪ್ತರಾಗಿದ್ದಾರೆ.

Similar News