WPL ಪೈನಲ್: ಮುಂಬೈಗೆ 132 ರನ್ ಗಳ ಗುರಿ ನೀಡಿದ ಡೆಲ್ಲಿ
Update: 2023-03-26 16:02 GMT
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟಿ20 ಟೂರ್ನಿಯ ಚೊಚ್ಚಲ ಕಿರೀಟಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯುತ್ತಿರುವ ಪೈನಲ್ ಹಣಾಹಣಿಯಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿ ಡೆಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್ ದಾಖಲಿಸಿ 132 ರನ್ ಗಳ ಗುರಿ ನೀಡಿದೆ.
ದಿಲ್ಲಿ ಪರ ನಾಯಕಿ ಮೆಗ್ ಲ್ಯಾನಿಂಗ್ 29 ಎಸೆತಗಳಲ್ಲಿ 35 ರನ್ ಸಿಡಿಸಿದರೆ, ರಾಧಾ ಮತ್ತು ಶಿಖಾ ತಲಾ 27 ರನ್ ಗಳಿಸಿ ಅಜೇಯರಾಗಿ ಉಳಿದರು.