ಕಾಸರಗೋಡು: ಆಸ್ಪತ್ರೆ ಆವರಣದ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
Update: 2023-03-27 08:49 GMT
ಕಾಸರಗೋಡು, ಮಾ.27: ನಗರ ಪರಿಸರದ ಬಾವಿಯೊಂದರಲ್ಲಿ ಅಪರಿಚಿತ ಪುರುಷನೊಬ್ಬನ ಮೃತದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ
ಕರಂದಕ್ಕಾಡ್ ಅಶ್ವಿನಿ ನಗರದ ಖಾಸಗಿ ಆಸ್ಪತ್ರೆ ಪರಿಸರದ ಬಾವಿಯಲ್ಲಿ ದುರ್ವಾಸನೆ ವ್ಯಾಪಿಸಿದ ಹಿನ್ನೆಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಕಾಸರಗೋಡು ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮಹಜರು ನಡೆಸಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.