ಬಾವಿಗೆ ಬಿದ್ದು ಮಹಿಳೆ ಮೃತ್ಯು
Update: 2023-03-28 14:33 GMT
ಬೈಂದೂರು : ಬಾವಿಯ ನೀರು ಸೇದುತ್ತಿದ್ದ ವೇಳೆ ಮಹಿಳೆಯೊಬ್ಬರು ಅಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಾ.27ರಂದು ಬೆಳಗ್ಗೆ ಉಳ್ತೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು 11ನೆ ಉಳ್ಳೂರು ಗ್ರಾಮದ ಶ್ರೀಮತಿ ಶೆಡ್ತಿ (55) ಎಂದು ಗುರುತಿಸ ಲಾಗಿದೆ. ಇವರು ಮನೆಯ ಬಾವಿಯಲ್ಲಿ ನೀರನ್ನು ಸೇದುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.