ಕರ್ನಾಟಕ ವಿಧಾನಸಭೆ ಚುನಾವಣೆ: ಇಂದು ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ
Update: 2023-03-29 04:20 GMT
ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ.
ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.
ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೆ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.
ಈ ತಿಂಗಳ ಆರಂಭದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಕರ್ನಾಟಕಕ್ಕೆ ಭೇಟಿ ನೀಡಿ ರಾಜ್ಯದಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ್ದರು.