ಮತ ಎಣಿಕೆಗೆ 2 ದಿನ ಬೇಕೆ ?: ನಟ ಉಪೇಂದ್ರ ಪ್ರಶ್ನೆ

Update: 2023-03-29 11:34 GMT

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸುತ್ತಿದ್ದಂತೆ 'ಉತ್ತಮ ಪ್ರಜಾಕೀಯ ಪಾರ್ಟಿ' ಸಂಸ್ಥಾಪಕ ಹಾಗೂ ನಟ ಉಪೇಂದ್ರ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಶ್ನೆಯೊಂದನ್ನು ಎತ್ತಿದ್ದು, #ElectionCommission ಅನ್ನು ಟ್ಯಾಗ್ ಮಾಡಿದ್ದಾರೆ. 

''ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದ ಮತದಾನ ಮತ್ತು ಮೇ 13, ಶನಿವಾರ ಫಲಿತಾಂಶ ಪ್ರಕಟ. ಮತ ಎಣಿಕೆಗೆ ಎರಡು ದಿನ ಬೇಕೆ ?! ಏಕೆಂದು ಬಲ್ಲವರು ತಿಳಿಸುತ್ತೀರಾ ?'' ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ. 

ಸದ್ಯ ಉಪೇಂದ್ರ ಅವರ ಈ ಪ್ರಶ್ನೆಗೆ ಹಲವರು ಕಮೆಂಟ್ ಮೂಲಕ ಉತ್ತರಿಸುತ್ತಿದ್ದಾರೆ. 

''ಉಪೇಂದ್ರ ಅವರೇ, ಚುನಾವಣೆ ಆದ ದಿನವೇ ಮತ ಎಣಿಕೆ ಮಾಡಲು ಹೇಗೆ ಸಾಧ್ಯ. ಹಳ್ಳಿ ಹಳ್ಳಿಗಳಿಂದ ಮತ ಪೆಟ್ಟಿಗೆ ಸುರಕ್ಷಿತವಾಗಿ ಕೊಂಡೊಯ್ದು,ನೋಂದಾಯಿತ ಮತ ಎಣಿಕೆ ಕೇಂದ್ರಕ್ಕೆ ತಲುಪಬೇಕು,ಇದಕ್ಕೆ ಸಮಯ ಬೇಕಲ್ಲವೇ?, ಮತ ಎಣಿಕೆ ಶುರುವಾಗುವುದು 13 ತಾರೀಕು,11/12 ಅಲ್ಲ.'' ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ. 

''ನಿಮ್ಮ  ಸಿನೆಮಾ ಚಿತ್ರೀಕರಣ ಮುಗಿದ ದಿನವೇ ಬಿಡುಗಡೆ ಮಾಡ್ತೀರಾ? ಏಕೆಂದು ತಿಳಿಸುವಿರಾ ಸ್ವಾಮಿ?'' ಎಂದು ಮನು ಬೆಂಗಳೂರು ಎಂಬವರು ಮರು ಪ್ರಶ್ನೆ ಮಾಡಿದ್ದಾರೆ. 
 

Similar News