ಧರ್ಮಸ್ಥಳ: ಲಾರಿ ಢಿಕ್ಕಿ; ಬೈಕ್‌ ಸವಾರ ಮೃತ್ಯು

Update: 2023-03-29 15:53 GMT

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಬೈಕಿಗೆ ಲಾರಿ ಢಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.

ಮೃತರನ್ನು ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ (27) ಎಂದು ಗುರುತಿಸಲಾಗಿದೆ.

ಇವರು ಬೈಕಿನಲ್ಲಿ ಮುಂಡ್ರುಪ್ಪಾಡಿಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದಾಗ ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹ ಸವಾರ ವಿಶ್ವನಾಥ್ ಎಂಬವರು ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Similar News