ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳನ್ನು ತೆಗೆಯಲು ಸೂಚನೆ
ಬೆಂಗಳೂರು, ಮಾ.29: ಸಾರ್ವತ್ರಿಕ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಸರಕಾರಿ ಕಚೇರಿ, ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ತೆಗೆಯಲು ಜಿಲ್ಲಾ ಚುನಾವಣಾ ಅಧಿಕಾರಿ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ವಲಯ ಜಂಟಿ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಡೆಸಿದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರಕಾರಿ ಕಚಚೇರಿ, ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಭಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಯಾರಾದರು ಪೋಸ್ಟರ್, ಬ್ಯಾನರ್ ಹಾಕಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲು ಮಾಡಿ ಎಂದು ಸೂಚನೆ ನೀಡಿದರು.
ಸಭೆಯಲ್ಲಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಜಯರಾಮ ರಾಯಪುರ, ಎಲ್ಲ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.