ಇಂದೋರ್: ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ; 13 ಮಂದಿ ಮೃತ್ಯು
Update: 2023-03-31 04:31 GMT
ಇಂದೋರ್: ರಾಮನವಮಿ ಆಚರಣೆ ವೇಳೆ ಇಂದೋರ್ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದ ಪರಿಣಾಮ 30 ಕ್ಕೂ ಹೆಚ್ಚು ಜನರು ಬಾವಿಗೆ ಬಿದ್ದ ಘಟನೆ ನಡೆದಿದ್ದು, ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ.
ನೂಕು ನುಗ್ಗಲಿನಿಂದಾಗಿ ಬಾವಿ ಮೇಲಿದ್ದ ನೆಲವು ಕುಸಿದು ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
17 ಮಂದಿಯನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳೇಶ್ವರ ಮಹಾದೇವ ದೇವಸ್ಥಾನದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ.
ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, "ಇಂಧೋರ್‌ನಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ನೋವಾಗಿದೆ. ಸಿಎಂ ಚೌಹಾಣ್ ಶಿವರಾಜ್ ಜಿ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ರಾಜ್ಯ ಸರ್ಕಾರವು ತ್ವರಿತ ಗತಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಮುನ್ನಡೆಸುತ್ತಿದೆ" ಎಂದು ಅವರು ಟ್ವೀಟ್ ಮಾಡಿದ್ದಾರೆ. .