ದ.ಕ.ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿ ಪದಕ
Update: 2023-03-30 14:07 GMT
ಮಂಗಳೂರು: ದ.ಕ. ಜಿಲ್ಲಾ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್‌ನ ಪೊಲೀಸ್ ಇನ್‌ಸ್ಪೆಕ್ಟರ್ ಪದ್ಮಯ ರಾಣೆ, ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ನಾಗರಾಜ್ ಎಚ್.ಇ., ಪುತ್ತೂರು ನಗರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಕೆ.ಪರಮೇಶ್ವರ ಅವರಿಗೆ ರಾಜ್ಯ ಸರಕಾರ ಮುಖ್ಯಮಂತ್ರಿಗಳ ಪದಕ ಘೋಷಿಸಿದೆ.
ಪೊಲೀಸ್ ಇನ್‌ಸ್ಪೆಕ್ಟರ್ ಪದ್ಮಯ ರಾಣೆ ಅವರು ತುರ್ತು ಸಂಖ್ಯೆ 112ರ ಜಿಲ್ಲಾ ನೋಡಲ್ ಅಧಿಕಾರಿಯಾಗಿ ಗಮನ ಸೆಳೆದಿದ್ದಾರೆ.